ಒಂಭತ್ತು ಮಾಗಣೆ ಕೊಲಕಾಡಿ ಶ್ರೀ ಕಾಳಿಕಾಂಬಾ ದೇವಿಯ ದೇವಸ್ಥಾನದ ವರ್ಷಾವಧಿ ಮಹೋತ್ಸವವು ಮಾರ್ಚ್ 16ರ ಆದಿತ್ಯವಾರ ವಿಜೃಂಭಣೆಯಿಂದ ನಡೆಯಲಿದೆ.
ಶ್ರೀ ದೇವಿ ಸನ್ನಿಧಿಯ ವರ್ಷಾವಧಿ ಮಹೋತ್ಸವವು
ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನಮಠ, ಸರಸ್ವತೀ ಪೀಠ ಪಡುಕುತ್ಯಾರು, ಉಡುಪಿ ಹಾಗೂ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶ್ರೀ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ವಿಶ್ವಕರ್ಮ ಜಗದ್ಗುರು ಪೀಠ, ಅರೆಮಾದನಹಳ್ಳಿ ಇವರ ದಿವ್ಯ ಉಪಸ್ಥಿತಿಯಲ್ಲಿ ಜರಗಲಿದೆ.
ಈ ಎಲ್ಲಾ ಕಾರ್ಯಕ್ರಮಗಳು ದಕ್ಷ ನ್ಯೂಸ್ ಯೂಟ್ಯೂಬ್ ಚಾನಲ್ ನಲ್ಲಿ ನೇರಪ್ರಸಾರವಾಗಲಿದೆ.