Mangalore and Udupi news
ಅಪರಾಧದಕ್ಷಿಣ ಕನ್ನಡಮಂಗಳೂರು

ಹಿಂದೂ ಯುವಕರು ಬೇರೆ ಧರ್ಮದ ಯುವತಿಯರನ್ನು ಮದ್ವೆಯಾಗ್ಬೇಕೆಂದ ಚಕ್ರವರ್ತಿ ಸೂಲಿಬೆಲೆ ವಿರುದ್ದ ಎಫ್ಐಆರ್.

ಮಂಗಳೂರು : ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡಿದ್ದ ಚಿಂತಕ, ಹಿಂದೂ ಫಯರ್ ಬ್ರಾಂಡ್ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಧರ್ಮ-ಧರ್ಮಗಳ ನಡುವೆ ದ್ವೇಷ ಪ್ರಚೋದನೆ ಅಡಿಯಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಮಾರ್ಚ್ 9ರಂದು ವಿ.ಎಚ್.ಪಿ ಹಮ್ಮಿಕೊಂಡಿದ್ದ ಕೊರಗಜ್ಜನ‌ ಆದಿಕ್ಷೇತ್ರಕ್ಕೆ ನಮ್ಮ‌ನಡೆ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಮಾತನಾಡಿ, ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಕರೆ ನೀಡಿದ್ದರು. ಇದು ಭಾರೀ ವಿವಾದ ಸೃಷ್ಟಿಸಿತ್ತು.

ಈ ಸಂಬಂಧ ಇದೀಗ ಪ್ರಚೋದನಕಾರಿ ಭಾಷಣ ಮಾಡಿ,‌ ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಈ ದೂರಿನ‌ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

Related posts

Leave a Comment