ಪಡುಬಿದ್ರಿ :- ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ (ರಿ) ವತಿಯಿಂದ
ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರ ಮಹೋತ್ಸವದ ಅಂಗವಾಗಿ 20 ನೇ ವರ್ಷದ “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾತ್ರಿ 8:00 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಗಣ್ಯಾಥಿ ಗಣ್ಯರು ಹಾಗು ಕನ್ನಡ ಮತ್ತು ತುಳು ಚಿತ್ರರಂಗದ ಖ್ಯಾತ ನಟ ನಟಿಯರು ಭಾಗವಹಿಸಲಿದ್ದು, ವಿವಿಧ ವಿಭಾಗದ ಸಾಧಕರಿಗೆ ಸನ್ಮಾನ ಮತ್ತು ಜಿಲ್ಲೆಯ ಪ್ರಸಿದ್ಧ ನೃತ್ಯ ತಂಡದವರಿಂದ *”ನೃತ್ಯ ವೃೆಭವ”* ಹಾಗು ಕೇರಳ ಮತ್ತು ಜಿಲ್ಲೆಯ ಸುಪ್ರಸಿದ್ಧ ಸಂಗೀತಾ ಕಲಾವಿದರೂಳಗೊಂಡ ಶಶಿ ಮ್ಯೂಸಿಕಲ್ ಪಡುಬಿದ್ರಿ ತಂಡದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮವು ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ತಿಳಿಸಿರುತ್ತಾರೆ…
ಕಳೆದ 19 ವರ್ಷಗಳಿಂದ ಈ ಸಂಸ್ಥೆಯು ಸಾಮಾಜಿಕ ಹಾಗು ಕಲಾ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಹಮ್ಮಿಕೊಂಡು ಬಂದಿರುತ್ತದೆ. ಪಡುಬಿದ್ರಿಯಲ್ಲಿ ಪ್ರಥಮ ಬಾರಿಗೆ ಉಭಯ ಜಿಲ್ಲಾ ಮಟ್ಟದ ಗೂಡುದೀಪ ಸ್ಪರ್ಧೆಯನ್ನು ಆಯೋಜಿಸಿರುತ್ತಾರೆ. ಗ್ರಾಮೀಣ ಮಟ್ಟದ ಕಲಾ ಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಕೂಡಾ ಕಲ್ಪಿಸಿಕೂಂಡು ಬರುತ್ತಿದೆ.
