Mangalore and Udupi news
ಅಪರಾಧಗ್ರೌಂಡ್ ರಿಪೋರ್ಟ್ಪ್ರಸ್ತುತರಾಜ್ಯ

“ಶತಕ ವೀರ ಅರೆಸ್ಟ್” – ಬರೋಬ್ಬರಿ 100 ಬೈಕ್ ಕಳ್ಳತನ.!!

Advertisement

ಬೆಂಗಳೂರು: ಬೈಕ್ ಕಳ್ಳತನದಲ್ಲಿ ಸೆಂಚುರಿ ಬಾರಿಸಿದ್ದ ಖತರ್ನಾಕ್ ಕಳ್ಳನನ್ನು ಕೆ ಆರ್ ಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 3 ವರ್ಷದಲ್ಲಿ ಬರೋಬ್ಬರಿ 100 ಬೈಕ್ ಕಳ್ಳತನ ಮಾಡಿರುವ ಖತರ್ನಾಕ್ ಖದೀಮ.

ಆಂಧ್ರಪ್ರದೇಶದ ಬಂಗಾರುಪಾಳ್ಯಂ ನಿವಾಸಿಯಾಗಿರುವ ಪ್ರಸಾದ್ ಬಾಬು ಬಂಧಿತ ಆರೋಪಿ. ಈತ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 100 ಬೈಕ್‌ಗಳನ್ನು ಕದ್ದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ದುಬಾರಿ ಬೆಲೆಯ ಬೈಕ್‌ಗಳನ್ನೇ ಟಾರ್ಗೆಟ್ ಮಾಡ್ತಿದ್ದ ಪ್ರಸಾದ್ ಬಾಬು, ಪ್ರತಿ ದಿನ ಸಂಜೆ ಬಸ್‌ನಲ್ಲಿ ಬೆಂಗಳೂರಿಗೆ ಬರುತ್ತಿದ್ದ. ನಂತರ ಕೆಆರ್ ಪುರ, ಟಿನ್ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ಓಡಾಟ ನಡೆಸಿ, ಮನೆ ಮುಂದೆ ನಿಲ್ಲಿಸಿದ ಬೈಕ್‌ಗಳ ಹ್ಯಾಂಡ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ.

ಬಂದ ದಿನವೇ ಬೈಕ್ ಕದ್ದು, ಅದೇ ಬೈಕ್‌ನಲ್ಲಿ ಊರಿಗೆ ಎಸ್ಕೇಪ್ ಆಗುತ್ತಿದ್ದ. ಬೆಂಗಳೂರು, ತಿರುಪತಿ, ಚಿತ್ತೂರು ಸೇರಿ ಹಲವೆಡೆ ಕಳ್ಳತನ ಮಾಡುತ್ತಿದ್ದ. ಪ್ರಸಾದ್ ಬಾಬು ಕದ್ದ ಬೈಕ್‌ಗಳನ್ನ 15-20 ಸಾವಿರಕ್ಕೆ ಆಂಧ್ರದಲ್ಲಿ ಮಾರಾಟ ಮಾಡಿ, ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಆರೋಪಿಯಿಂದ 20 ರಾಯಲ್ ಎನ್‌ಫೀಲ್ಡ್ ಬೈಕ್, 30 ಫಲ್ಸರ್ ಬೈಕ್, 40 ಆಕ್ಟಿವಾ ಹಾಗೂ ಇತರೆ ಸುಮಾರು 1.45 ಕೋಟಿ ರೂ. ಮೌಲ್ಯದ 100 ಬೈಕ್ ವಶಕ್ಕೆ ಪಡೆದ ಕೆಆರ್ ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

Leave a Comment