ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಚಿಕ್ಕಮಗಳೂರಿನ ಅಬ್ದುಲ್ ಹಮೀದ್ (48) ಎಂದು ಗುರುತಿಸಲಾಗಿದೆ.
ಮಂಡ್ಯ ಜಿಲ್ಲೆಯ ತಾವರೆಕೆರೆಯಲ್ಲಿ ಉಡುಪಿ ನಗರ ಪೊಲೀಸ್ ಸಿಬ್ಬಂದಿ ಸಂಜಯ್ ಹೆಚ್ ಸಿ ಮತ್ತು ಹೇಮಂತ್ ಕುಮಾರ್ ಎಂ ಅವರನ್ನು ಬಂಧಿಸಿದ್ದಾರೆ.ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಫೆಬ್ರವರಿ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
