ವಿಟ್ಲ : ಹಿಂದೂ ಜಾಗರಣ ವೇದಿಕೆ ವತಿಯಿಂದ ಇದೇ ಬರುವ ದಿನಾಂಕ 23/02/2025 ನೇ ಆದಿತ್ಯವಾರದಂದು ವಿಟ್ಲದಲ್ಲಿ ಹಿಂದೂ ಯುವ ಸಂಗಮ ಬೃಹತ್ ಮೆರವಣಿಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಎಬಿವಿಪಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಭಾಗ ಸಂಪೂರ್ಣ ಬೆಂಬಲ ಸೂಚಿಸಿದೆ.
ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು, ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಇವರ ಜನ್ಮದಿನದ ಪ್ರಯುಕ್ತ ಹಿಂದೂ ಯುವ ಸಮಾವೇಶ ವಿಟ್ಲ ಪಂಚಲಿoಗೇಶ್ವರ ದೇವಸ್ಥಾನದ ಮುಂಭಾಗ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈ ಹಿಂದೂ ಯುವ ಸಮಾವೇಶಕ್ಕೆ ಎಬಿವಿಪಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿಭಾಗದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಹೃತೇಶ್ ಪಾಟಾಳಿಯವರು ವಿದ್ಯಾರ್ಥಿಗಳ ಪರವಾಗಿ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.
