ಉಳ್ಳಾಲ: ಬ್ಯಾಂಕ್ ಲಾಕರ್‌ನಲ್ಲಿ ಗ್ರಾಹಕರು ಇಟ್ಟಿದ್ದ 8 ಲಕ್ಷ ರೂ. ಗೆದ್ದಲು ಪಾಲಾದ ಘಟನೆ ಕೋಟೆಕಾರ್‌ನ ರಾಷ್ಟ್ರೀಕೃತ ಬ್ಯಾಂಕೊoದರಲ್ಲಿ ನಡೆದಿದೆ.
ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿ 8 ಲಕ್ಷ ಹಣ ಇಟ್ಟಿದ್ದರು, ಗೆದ್ದಲು ಹೀಡಿದ ಕಾರಣ ನಷ್ಟ ಉಂಟಾಗಿದೆ. ಇದಕ್ಕೆ ಬ್ಯಾಂಕಿನ ನಿರ್ವಹಣೆ ಕೊರತೆಯೇ ಕಾರಣ ಎಂದು ಹಣ ಕಳೆದುಕೊಂಡವರು ಆರೋಪಿಸಿದ್ದು, ಆದರೆ ಇದು ನಮಗೆ ಸಂಬoಧಪಟ್ಟ ವಿಷಯವಲ್ಲ ಎಂದು ಬ್ಯಾಂಕಿನವರು ಹೇಳಿದ್ದಾರೆ.
ಆರ್‌ಬಿಐ ನಿಯಮ ಪ್ರಕಾರ ಲಾಕರ್‌ನಲ್ಲಿ ಹಣ ಇರಿಸುವಂತಿಲ್ಲ. ಆದ್ದರಿಂದ ಹಣ ಗೆದ್ದಲು ಪಾಲಾಗಿರುವುದು ನಮಗೆ ಸಂಬoಧಿಸಿದ ವಿಷಯವಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ. ಹಣ ಕಳೆದುಕೊಂಡವರು ಈ ಸಂಬAಧ ಬೆಂಗಳೂರಿನ ಪ್ರಧಾನ ಕಚೇರಿಗೆ ದೂರು ನೀಡಿದ್ದು, ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದ್ದು, ಅದನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಸಫಲ್ ಮಂಗಳೂರಿನ ಕೋಟೆಕಾರ್‌ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಲಾಕರ್ ತೆರೆದಿದ್ದಾರೆ. ಬ್ಯಾಂಕ್ ನವರೇ ಖುದ್ದಾಗಿ ಲಾಕರ್ ಓಪನ್ ಮಾಡಿದ್ದಾರೆ. ಲಾಕರ್ ಮಳೆನೀರಿನಲ್ಲಿ ನೆಂದ ಸ್ಥಿತಿಯಲ್ಲಿದ್ದರೆ ದುಡ್ಡು ಸಂಪೂರ್ಣವಾಗಿ ಕಪ್ಪಾಗಿ ಹುಡಿ ಹುಡಿಯಾಗಿ ಗೆದ್ದಲು ಹಿಡಿದು ಚೂರಾಗಿ ಬಿದ್ದಿದೆ. ಎಂಟು ಲಕ್ಷ ರೂ. ದುಡ್ಡು ಇದೇ ರೀತಿ ಆಗಿದೆ.
ಆರ್‌ಬಿಐ ನಿಯಮದ ಪ್ರಕಾರ ಪ್ರಕಾರ ದುಡ್ಡನ್ನು ಲಾಕರ್‌ನಲ್ಲಿ ಇಡುವಂತಿಲ್ಲ ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಬ್ಯಾಂಕ್‌ನವರು ಹೇಳಿದ್ದಾರೆ. ಹೀಗಾಗಿ ಸಫಲ್ ಕುಟುಂಬಸ್ಥರು ಬೆಂಗಳೂರಿಗೆ ಆಗಮಿಸಿ ಪ್ರಧಾನ ಕಚೇರಿಗೆ ದೂರು ನೀಡಿ, ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಹೀಗಾಗಿ ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ.ಲಾಕರ್‌ನಲ್ಲಿ ಹಣ ಇಡಬಾರದು ನಿಜ. ಆದರೆ ಬ್ಯಾಂಕ್‌ನಲ್ಲಿ ಹಣ ಇಟ್ಟರೆ ಸೇಫ್ ಎಂಬ ನಂಬಿಕೆಯಿದೆ. ಆದರೆ ನಿರ್ವಹಣೆ ಕೊರತೆಯಿಂದ ಈ ರೀತಿ ಸಮಸ್ಯೆಯಾದರೆ ಹೊಣೆ ಯಾರು ಎನ್ನುವುದೇ ಪ್ರಶ್ನೆ.
