Mangalore and Udupi news
ಅಪರಾಧದಕ್ಷಿಣ ಕನ್ನಡಮಂಗಳೂರು

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ NIA ಹೆಗಲಿಗೆ

ಕೇಂದ್ರ ಗೃಹ ಸಚಿವಾಲಯ, ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ.


ಬಿಜೆಪಿ ಕಾರ್ಯಕರ್ತರು ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳದ ನಾಯಕರು ಮತ್ತು ಕಾರ್ಯಕರ್ತರು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟಿಸಿದ್ದರು. ಇಂದು ಆಯಾ ಪ್ರತಿಭಟನೆಗೆ ಯಶಸ್ಸು ದೊರೆತಿದ್ದು, ಕಡೆಗೂ ರಾಷ್ಟ್ರೀಯ ತನಿಖಾ ದಳಕ್ಕೆ ಈ ಹತ್ಯೆ ಪ್ರಕರಣವನ್ನು ವಹಿಸಲಾಗಿದೆ.
ಪ್ರಕರಣದ ಸಂಬಂಧ ಈಗಾಗಲೇ ಪೊಲೀಸರು 11 ಮಂದಿಯನ್ನು ಬಂಧಿಸಿದ್ದರು.

Related posts

Leave a Comment