ಮುಲ್ಕಿ: ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕಿನ್ನಿಗೋಳಿಯ ಉದ್ಯಮಿ, ಪಿಂಟೋ ಗಾರ್ಡನ್ ಮಾಲೀಕ ರೋಕಿ ಪಿಂಟೋ (68) ಅವರನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.
ಪೀಡಿತ ಬಾಲಕಿಯ ತಾಯಿ ನೀಡಿದ ದೂರಿನಡಿಯಲ್ಲಿ ಹಾಗೂ ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗೆ ಪೋಕ್ಸ್ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಘಟನೆ ವಿವರ:
ಮೇ ಮತ್ತು ಜೂನ್ ತಿಂಗಳಲ್ಲಿ ಆರೋಪಿಯು ತನ್ನ ಫಾರ್ಚುನರ್ ವಾಹನದಲ್ಲಿ ಶಾಲೆಗೆ ಕರೆದೊಯ್ಯುವ ನೆಪದಲ್ಲಿ ಬಾಲಕಿಗೆ ಪುಸಲಾಯಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೇ, ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದ ಎಂಬ ಆರೋಪವೂ ಕೇಳಿಬಂದಿದೆ.
ದೂರು ಸಲ್ಲಿಸಿದ ತಕ್ಷಣವೇ ಮುಲ್ಕಿ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಯು ಬಳಸುತ್ತಿದ್ದ ಫಾರ್ಚುನರ್ ವಾಹನವನ್ನೂ ವಶಪಡಿಸಿಕೊಂಡಿದ್ದಾರೆ. ಆರೋಪಿ ಪಿಂಟೋನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ಅವರು ಅಧಿಕ ರಕ್ತದೊತ್ತಡದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿಂದೆಯೂ ಇದೇ ಬಾಲಕಿಯ ತಾಯಿ, ತಮ್ಮ ಮಗಳ ಮೇಲಿನ ಅತ್ಯಾಚಾರದ ಪ್ರಕರಣದಲ್ಲಿ ಮತ್ತೊಂದು ದೂರು ನೀಡಿದ್ದು, ಆಗ ಮುಲ್ಕಿ ಪೊಲೀಸರು ಆರೋಪಿಗಳಾದ ಐವರು ಬಾಲಕರನ್ನು ಕೂಡ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಿದ್ದರು.