Mangalore and Udupi news
Blog

ಉಡುಪಿ : ಕಳವು ಪ್ರಕರಣ : ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ…!!

ಉಡುಪಿ : ನಗರದಲ್ಲಿ ಜು.19ರಂದು ರಾತ್ರಿ ವಸತಿ ಗೃಹದಲ್ಲಿನ ನಾಲ್ಕು ಮನೆಗಳಿಗೆ ನುಗ್ಗಿದ ಕಳ್ಳರು, ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಎರಡು ದಿನಗಳ ಹಿಂದೆ ನಗರದ ಮಿಷನ್ ಕಂಪೌಂಡಿನಲ್ಲಿರುವ ಲೋಕೋಪಯೋಗಿ ಇಲಾಖೆಯ ಸರಕಾರಿ ವಸತಿ ಗೃಹದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಮಧ್ಯಪ್ರದೇಶದ ಇಬ್ಬರು ಅಂತರ್ ರಾಜ್ಯ ಕಳವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು : ಮಧ್ಯಪ್ರದೇಶದ ಬಂಗಡ ಯಾನೆ ಬಾಂಗು ಯಾನೆ ರಮೇಶ್ ಜವಾನ್ ಸಿಂಗ್(37) ಹಾಗೂ ಕಾಲಿಯಾ ಯಾನೆ ಕಾಲು(25) ಎಂದು ಗುರುತಿಸಲಾಗಿದೆ ‌


ಈ ಪ್ರಕರಣದಲ್ಲಿ ಪರಾರಿಯಾಗಿರುವ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Related posts

Leave a Comment