ಉಡುಪಿ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರ (ಜು.24) ರಂದು ನಾಳೆ ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ, ಖಾಸಗಿ ವಿದ್ಯಾಸಂಸ್ಥೆ, ಪದವಿ ಪೂರ್ವ ಕಾಲೇಜು ಮತ್ತು ಐಟಿಐ ಗಳಿಗೆ ರಜೆ ಘೋಷಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದೆ, ಜೊತೆಗೆ ಹವಾಮಾನ ಇಲಾಖೆ ಬುಧವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಿತ್ತು. ಭಾರೀ ಮಳೆಯ ಹಿನ್ನೆಲೆಯಲ್ಲಿ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಮುನ್ಸೂಚನೆ ನೀಡಿದೆ.