ಮುಧೋಳ: ಲೋಕಾಪುರ ಸಮೀಪದ ಕಾಡರಕೊಪ್ಪ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾದ ಘಟನೆ ನಡೆದಿದೆ.
ಅವಘಡದಲ್ಲಿ 12ಮಕ್ಕಳು ಹಾಗೂ ಓರ್ವ ಶಿಕ್ಷಕಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
12 ಮಕ್ಕಳ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಓರ್ವ ವಿದ್ಯಾರ್ಥಿಯನ್ನು ಲೋಕಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಉಳಿದವರಿಗೆ ತರಚಿದ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಈ ಕುರೊತು ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.