ಮಂಗಳೂರು : ಮದುವೆಯಾಗಿ ಮೂವರು ಮಕ್ಕಳಿದ್ದರು ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವರ್ಷದ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ ಏರ್ ಪೋರ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ.
ಕಾಸರಗೋಡು ನಿವಾಸಿ ಮುಹಮ್ಮದ್ ಸಾಲಿ ಬಂಧಿತ ಆರೋಪಿ. ವಿದೇಶದಿಂದ ಹಿಂದಿರುಗಿದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಏಳು ವರ್ಷಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದ ಸಾಲಿ, ಶಾಲು ಕಿಂಗ್ ಮೀಡಿಯಾ, ಶಾಲು ಕಿಂಗ್ ವ್ಲಾಗ್ಸ್ ಮತ್ತು ಶಾಲು ಕಿಂಗ್ ಫ್ಯಾಮಿಲಿ ಸೇರಿದಂತೆ ವಿವಿಧ ಹೆಸರುಗಳಲ್ಲಿ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಹೊಂದಿದ್ದಾರೆ.
ಈತನಿಗೆ 2016 ರಲ್ಲಿ ವಿವಾಹವಾದ ಮೂವರು ಮಕ್ಕಳಿದ್ದಾರೆ. ಪತ್ನಿಯಿಂದ ದೂರವಾಗಿದ್ದ ಸಮಯದಲ್ಲಿ ಇನ್‌ಸ್ಟಾಗ್ರಾಮ್ ಮತ್ತು ಸ್ನ್ಯಾಪ್‌ಚಾಟ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಆಕೆಗೆ ನಾನು ಮದುವೆಯಾಗುತ್ತೇನೆ ಎಂದು ಹೇಳಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈತನ ಮೇಲೆ ಪ್ರಕರಣ ದಾಖಲಾದ ನಂತರ, ಆರೋಪಿ ದೇಶ ಬಿಟ್ಟು ಪರಾರಿಯಾಗಿದ್ದಾನೆ. ಕೊಯಿಲಾಂಡಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದು, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಆತನನ್ನು ಬಂಧಿಸಲಾಗಿದೆ