Mangalore and Udupi news
Blog

ಧರ್ಮಸ್ಥಳ ಪ್ರಕರಣ: 8 ಅಡಿ ಅಗೆದರೂ ಸಿಕ್ಕಿಲ್ಲ ಕಳೇಬರ

ಧರ್ಮಸ್ಥಳ: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ.

ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲಿ ಗುರುತಿಸಿದ್ದ ಸಮಾಧಿ ಸ್ಥಳವನ್ನು ಅಗೆಯಲಾಗಿತ್ತು. ಆದರೆ ಮೊದಲ ಪ್ರಯತ್ನದಲ್ಲೇ ಎಸ್‌ಐಟಿ ತಂಡಕ್ಕೆ ಹಿನ್ನಡೆಯಾಗಿದೆ.

ಮೊದಲಿಗೆ ಕಾರ್ಮಿಕರ ಮೂಲಕ 4 ಅಡಿ ಅಗೆಯಲಾಗಿತ್ತು.

ನಂತರ ಜೆಸಿಬಿ ಮೂಲಕ 8 ಅಡಿ ಅಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. ಗಡ್ವಾಲ್ ಮೊದಲ ಸಮಾಧಿ ಸ್ಥಳದ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. ದೂರದಾರ ವ್ಯಕ್ತಿ 6 ಅಡಿಯಲ್ಲಿ ಶವ ಹೂತಿಟ್ಟಿರುವುದಾಗಿ ಹೇಳಿದ್ದನು.

ಆದರೆ 6 ಅಡಿಯಲ್ಲೂ ಸಿಗದ ಕಾರಣ 8 ಅಡಿ ಅಗೆಯಲಾಗಿತ್ತು. ಹೀಗಾಗಿ ಸಮಾಧಿ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. ಇದೀಗ ದೂರುದಾರ ಗುರುತಿಸಿದ 2ನೇ ಸಮಾಧಿ ಸ್ಥಳ ಅಗೆಯುವ ಕಾರ್ಯ ಇಂದು ಆರಂಭಗೊಳ್ಳಲಿದೆ.

Related posts

Leave a Comment