ಬೈಂದೂರು : ಸಮುದ್ರದ ಭಾರೀ ಅಲೆಗೆ ಸಿಲುಕಿದ ಮೀನುಗಾರಿಕಾ ದೋಣಿಯೊಂದು ಮಗುಚಿ ಬಿದ್ದಿದ್ದು, ಇದರಲ್ಲಿದ್ದ 9 ಮೀನುಗಾರರು ಲೈಫ್ ಜಾಕೇಟ್ ಧರಿಸಿದ್ದರಿಂದ ಅಪಾಯದಿಂದ ಪಾರಾಗಿ ದಡ ಸೇರಿದ ಘಟನೆ ನಡೆದಿದೆ.
ಅಪಾಯದಿಂದ ಪಾರಾದ ಮೀನುಗಾರು ಉಪ್ಪುಂದ ಮೂಲದ ಚಂದ್ರ ಖಾರ್ವಿ, ಪ್ರಮೋದ್, ಪ್ರಜ್ವಲ್, ಗೌತಮ್, ಭಾಸ್ಕರ, ಯೋಗಿರಾಜ್, ಗೋವಿಂದ, ಬಾಬು ಖಾರ್ವಿ, ದೀಪಕ್ ಎಂದು ತಿಳಿಯಲಾಗಿದೆ.
ಇವರೆಲ್ಲ ಬೆಳಿಗ್ಗೆ ಉಪ್ಪುಂದ ಶಾರದಾ ಖಾರ್ವಿ ಎಂಬವರ ಮಾಲೀಕತ್ವದ ಶಿವಪ್ರಸಾದ್ ದೋಣಿಯು ಮೀನುಗಾರಿಕೆಗೆ ತೆರಳಿದ್ದರು. ಮಡಿಕಲ್ ಎಲ್.ಪಿ. ಸಮೀಪ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿತ್ತು ಎಂದು ತಿಳಿದು ಬಂದಿದೆ.
ಇದರಿಂದ ದೋಣಿಯಲ್ಲಿದ್ದ ಎಲ್ಲ 9 ಮಂದಿ ಮೀನುಗಾರರು ಕೂಡ ನೀರಿಗೆ ಬಿದ್ದರು. ಎಲ್ಲ ಮೀನುಗಾರರು ಲೈಪ್ ಜಾಕೆಟ್ ಧರಿಸಿದ್ದರಿಂದ ಸಮುದ್ರದಲ್ಲಿ ಈಜುತ್ತಿದ್ದರು. ಕೂಡಲೇ ದಡದಲ್ಲಿದ್ದ ಇತರು ಇವರನ್ನು ರಕ್ಷಿಸಿದ್ದಾರೆ.