Mangalore and Udupi news
Blog

ಸಾರ್ವಜನಿಕರೊಂದಿಗೆ ಅನುಚಿತ ವರ್ತನೆ ಆರೋಪ: ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಪುತ್ತೂರು : ಕರ್ನಾಟಕ- ಕೇರಳ ಗಡಿ ಪ್ರದೇಶದ, ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಭಾನುವಾರ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಜನರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ನಿಷೇಧಿತ ಮಾದಕ ವಸ್ತು ಸೇವಿಸಿ ಈ ರೀತಿ ವರ್ತಿಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಸ್ಥಳೀಯರು ಹಗ್ಗದಿಂದ ಆತನ ಕೈ-ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈಶ್ವರಮಂಗಲ ಹೊರ ಠಾಣೆ ಪೊಲೀಸರು ಬಂದು ಆತನನ್ನು ವಶಕ್ಕೆ ಪಡೆದುಕೊಂಡು, ಸಂಪ್ಯ ಠಾಣೆಗೆ ಕರೆದೊಯ್ದುರು. ಬಳಿಕ ವೈದ್ಯಕೀಯ ಪರೀಕ್ಷೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆತ ಕಾಸರಗೋಡಿನ ಮುಳ್ಳೇರಿಯದ ವ್ಯಕ್ತಿ ಎಂದು ಮಾಹಿತಿ ಲಭಿಸಿದೆ.

Related posts

Leave a Comment