Mangalore and Udupi news
Blog

ಕಾಂತಾರ ಸಿನಿಮಾದ ಖ್ಯಾತ ನಟ ಟಿ. ಪ್ರಭಾಕರ ಕಲ್ಯಾಣಿ ಇಂದು ಹೃದಯಾಘಾತದಿಂದ ನಿಧನ

ಉಡುಪಿ : ಕಾಂತಾರ ಚಿತ್ರದಲ್ಲಿ ನಟಿಸಿದ್ದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ. ಪ್ರಭಾಕ‌ರ್ ಕಲ್ಯಾಣಿ ಹೃದಯಾಘಾತದಿಂದ ಹಿರಿಯಡ್ಕದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ.
ಕಳೆದ 3 ದಿನಗಳ ಹಿಂದೆ ಹಿರಿಯಡಕ ಪೇಟೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆ ಬಳಿಕ ಮನೆಯಲ್ಲೇ ವಿಶ್ರಾಂತಿಯಲ್ಲಿದ್ದರು ಎನ್ನಲಾಗಿದೆ. ಇಂದು ಮಲಗಿದಲ್ಲಿಯೇ ಹೃದಯಘಾತಕ್ಕೆ ಬಲಿಯಾಗಿದ್ದಾರೆ . 5 ವರ್ಷದ ಹಿಂದೆ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಸ್ಟಂಟ್ ಹಾಕಲಾಗಿತ್ತು.
ಮೃತರು ರಂಗಭೂಮಿ ಕಲಾವಿದರಾಗಿದ್ದು, ಕಾಂತಾರ ಚಿತ್ರದಲ್ಲಿ ಕಲಾವಿದರಾಗಿ ಅಭಿನಯಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಅನೇಕ ಬಂಧು-ಮಿತ್ರರನ್ನು ಅಗಲಿದ್ದಾರೆ.

ರಂಗಭೂಮಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಪ್ರಭಾಕ‌ರ್, ವಿವಿಧ ರಂಗ ನಾಟಕಗಳಲ್ಲಿ ಸಕ್ರಿಯವಾಗಿ ಅಭಿನಯಿಸಿದ್ದರು. ಅವರ ಅಂತಿಮ ವಿಧಿವಿಧಾನಗಳನ್ನು ಶುಕ್ರವಾರ ಬೀಡಿನಗುಡ್ಡೆ ಸ್ಮಶಾನದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದೆ.

Related posts

Leave a Comment