Mangalore and Udupi news
Blog

ಮಲ್ಪೆ : ಸಮುದ್ರ ಪಾಲಾಗುತ್ತಿದ್ದ ಮೂವರ ರಕ್ಷಣೆ…!!

ಹೂಡೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಹೂಡೆ ಎಂಬಲ್ಲಿ ಮಳೆಗಾಲದ ಪ್ರಕ್ಷುಬ್ಧ ಸಮುದ್ರದಲ್ಲಿ ಈಜಲು ಹೋಗಿದ್ದ ಮೂವರು ಪ್ರವಾಸಿಗರು ಅಪಾಯಕ್ಕೆ ಸಿಲುಕಿಕೊಂಡಿದ್ದರು ಸ್ಥಳೀಯರ ಸಮಯ ಪ್ರಜ್ಞೆಯಿಂದ ಈಜಲು ಹೋದ ಈ ಮೂವರ ಪ್ರಾಣ ಉಳಿದಿದೆ.


ಸ್ಥಳೀಯ ನಿವಾಸಿ ರಾಜ ಎಂಬುವವರು ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ್ದಾರೆಂದು ತಿಳಿದು ಬಂದಿದೆ. ನಂತರ ಅವರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ವಾರಾಂತ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹೂಡೆ ಬೀಚ್ ನಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಜಿಲ್ಲಾಡಳಿತದ ಸೂಚನೆ ಉಲ್ಲಂಘಿಸಿ ಸಮುದ್ರಕ್ಕೆ ಇಳಿದು ತಮ್ಮ ಜೀವವನ್ನು ಅಪಾಯಕ್ಕೊಡ್ಡಿಕೊಳ್ಳುತ್ತಾರೆ. ಈ ಮುಂಚೆ ಹೂಡೆ ಬೀಚ್ ನಲ್ಲಿ ಇಬ್ಬರು ಪ್ರವಾಸಿಗರು ಈಜಲು ಹೋಗಿ ಪ್ರಾಣ ಕಳೆದುಕೊಂಡಿದ್ದರು.

Related posts

Leave a Comment