Mangalore and Udupi news
Blog

15 ಕಡೆ ಭೂಕುಸಿತ, ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್

ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಪ್ರಯಾಣಿಕರ ಮತ್ತು ಸರಕು ರೈಲುಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ರೈಲ್ವೆ ಇಲಾಖೆ ಸಿಬ್ಬಂದಿಯಿಂದ ದುರಸ್ತಿ ಕಾರ್ಯ ನಡೆದಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿಯಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾಗಿದ್ರಿಂದಾಗಿ ಮರ, ಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.

7 KM ವ್ಯಾಪ್ತಿಯಲ್ಲಿ 15 ಕಡೆ ಭೂಕುಸಿತ
ಹಾಸನದ ಸಕಲೇಶಪುರದ 7 ಕಿ.ಮೀ ವ್ಯಾಪ್ತಿಯಲ್ಲೇ 15 ಕಡೆ ಭೂಕುಸಿತವಾಗಿದೆ. ಎಡಕುಮಾರಿ ಸಮೀಪ ಹಳಿ ಮೇಲೆ ಮಣ್ಣು ಕುಸಿದು ಬೆಂಗಳೂರು ಟು ಮಂಗಳೂರು ರೈಲ್ವೆ ಮಾರ್ಗ ತಾತ್ಕಾಲಿಕ ಸ್ಥಗಿತವಾಗಿದೆ. ಮತ್ತೊಂದೆಡೆ ಇದೇ ಮಾರನಹಳ್ಳಿ ಸಮೇಪ ಕಾರಿನ ಮೇಲೆ ಬೃಹತ್‌ ಮರವೊಂದು ಬಿದ್ದಿದೆ. ಮಳೆ ನಡುವೆಯೂ ಪೊಲೀಸರು ಕಾರಿನಲ್ಲಿದ್ದವರನ್ನ ರಕ್ಷಿಸಿದ್ದಾರೆ.

Related posts

Leave a Comment