ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಈ ಕಳ್ಳತನ ಪ್ರಕರಣದಲ್ಲಿ ಈಗಾಗಲೇ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಗಾಡ್ ನ ಆರ್ಷದ್ ಎಂಬಾತರು ದಸ್ತಗಿರಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್ ಕಳ್ಳತನದ ಮುಖ್ಯ ಸಂಚುಕೋರನಾದ ಅಬ್ದುಲ್ ಲತೀಫ್ @ ಲತೀಫ್ ಪ್ರಾಯ 47 ವರ್ಷ ತಂದೆ : ಕುಂಜಿ ಅಬ್ದುಲ್ಲಾ ವಾಸ: ಮಂಡಿಯಾನ್ ಮನೆ, ಅರಿಕಾರ ಅಂಚೆ ಬಳಲಿ, ತಾಲ್ಲೂಕು : ವೆಲ್ಲರಿಕುಂಡು, ಜಿಲ್ಲೆ : ಕಾಸರಗೋಡು, ಕೇರಳ ರಾಜ್ಯ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
ಅಬ್ದುಲ್ ಲತೀಫ್ @ ಲತೀಫ್ ಎಂಬಾತನ ಮೇಲೆ ಈ ಹಿಂದೆ ಕೇರಳ ರಾಜ್ಯದ ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಧಾನಿ ಜುವೆಲ್ಲರಿ ಶಾಪ್ ನ ಸುಮಾರು 20 ಕೆಜಿಯಷ್ಟು ಬಂಗಾರವನ್ನು ಕಳ್ಳತನ ಮಾಡಿದ ಪ್ರಕರಣ ಮತ್ತು ಕೇರಳ ರಾಜ್ಯದ ಚಂದೇರ್ ಪೊಲೀಸ್ ಠಾಣಾ ವ್ಯಾಪ್ತಿಯ ಚೆರವತ್ತೂರು ವಿಜಯ ಬ್ಯಾಂಕ್ ನ ಸುಮಾರು 15.80 ಕೆಜಿಯಷ್ಟು ಬಂಗಾರ ಮತ್ತು 2.5 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುತ್ತಾನೆ.ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.