Mangalore and Udupi news
Blog

ಮಂಗಳೂರು : ಮಾದಕವಸ್ತು ಸೇವನೆ : ಆರೋಪಿಯ ಬಂಧನ….!!

ಮಂಗಳೂರು :‌ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿಯೋರ್ವನನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮೊಹಮ್ಮದ್‌ ಹಪೀಜ್ ಎಂದು ಗುರುತಿಸಲಾಗಿದೆ.

ಪ್ರಕರಣದ ಸಾರಾಂಶ : ದಿನಾಂಕ 22-08-2025 ರಂದು ಮದ್ಯಾಹ್ನ 13-00 ಗಂಟೆಗೆ ಪಿರ್ಯಾದಿದಾರರಾದ ಸಾಗರ್ ದೇವಕತ್ತಿ ಪಿಸಿ ಮತ್ತು ಪಿಸಿ ಸ್ವಾಮಿ ರವರು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಮಂಗಳೂರು ನಗರದ ಪಾಂಡೇಶ್ವರ ರೈಲ್ವೇ ಹಳಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪಿ ಮೊಹಮ್ಮದ್ ಹಪೀಜ್ ಪ್ರಾಯ 20 ವರ್ಷ ವಾಸ: ಎಂ ಆರ್ ಭಟ್ ಲೇನ್ ಮಾರ್ನಮಿಕಟ್ಟೆ ಮಂಗಳೂರು ಎಂಬವರನ್ನು ಮದ್ಯಾಹ್ನ 13-20 ಗಂಟೆಗೆ ವಶಕ್ಕೆ ಪಡೆದುಕೊಂಡು ಸದ್ರಿ ವ್ಯಕ್ತಿಯು ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ತಪಾಸಣೆಗಾಗಿ ಮಂಗಳೂರು ನಗರದ ಎ.ಜೆ ಆಸ್ಪತ್ರೆಯ ವೈಧ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿ ಪರೀಕ್ಷೆಗೊಳಪಡಿಸಿದಾಗ, ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿರುವುದರಿಂದ ಆರೋಪಿಯ ವಿರುದ್ದ ಕಲಂ 27(a), 27 (b) ಎನ್ ಡಿ.ಪಿ.ಎಸ್ ಆಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡಿರುವುದಾಗಿದೆ

Related posts

Leave a Comment