Mangalore and Udupi news
Blog

ಮಂಗಳೂರು; ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು

ಮಂಗಳೂರು; ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗೆ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕೋ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

15 ವರ್ಷದ ಬಾಲಕಿ ಮೇಲೆ ಆರೋಪಿ ಅತ್ಯಾಚಾರ ನಡೆಸಿದ ಪ್ರಕರಣ ಮಂಗಳೂರಿನ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂದೇಶ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯ ವಿರುದ್ಧ ಪೋಕೋ ಕಾಯ್ದೆಯ ಸೆಕ್ಷನ್ 4 ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 137(2), ಸೆಕ್ಷನ್ 65 ಮತ್ತು 351ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆರೋಪಿಯು ಸಂತ್ರಸ್ತೆಯನ್ನು ತನ್ನ ಮೊಬೈಲ್ ನಲ್ಲಿ ಇನ್ನೂಗ್ರಾಂ ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು ಬಳಿಕ ಪುಸಲಾಯಿಸಿ ಉಡುಪಿ ಜಿಲ್ಲೆಯ ವಿಹಾರತಾಣಕ್ಕೆ ಕರೆದೊಯ್ದು ಲೈಂಗಿಕವಾಗಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಗಿತ್ತು. ಸಂತ್ರಸ್ತೆ ಗರ್ಭಿಣಿ ಎಂದು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಸೂಕ್ತ ಕಾನೂನು ರಕ್ಷಣೆ ನೀಡಲಾಗಿತ್ತು.

Related posts

Leave a Comment