Mangalore and Udupi news
Blog

ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ” ಆಮಂತ್ರಣ ಬಿಡುಗಡೆ…

ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಯನ್ನು ಸೆ.21ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಯುವಜನತೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾ ದರ್ಶಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿರುವ ‘ಗುರು ಸಂದೇಶ ಸಾಮರಸ್ಯ ಜಾಥಾ’ದ ಆಮಂತ್ರಣ ಪತ್ರಿಕೆ ಬಿಡುಗಡೆ ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ನಡೆಯಿತು.

ರಘು ಪೂಜಾರಿ ಕಲಂಜೆ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಪ್ರವೀಣ್ ಎಂ. ಪೂಜಾರಿ ಅವರು, ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾದ ಬಗ್ಗೆ ಪ್ರಸ್ತಾವನೆಗೈದರು.

ಯುವ ವೇದಿಕೆ ಗೌರವಾಧ್ಯಕ್ಷ ದಿವಾಕರ ಸನಿಲ್, ಬನ್ನಂಜೆ ಬಿಲ್ಲವರ ಸಂಘದ ಅಧ್ಯಕ್ಷ ಮಾಧವ ಬನ್ನಂಜೆ, ಮಲ್ಪೆ ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಯುವವಾಹಿನಿ ಉಡುಪಿ ಘಟಕ ಅಧ್ಯಕ್ಷ ದಯಾನಂದ್ ಕರ್ಕೇರ, ಮಣಿಪಾಲ ಸೀತಾ ಲಾಜಿಸ್ಟಿಕ್ ಮಾಲಕ ಪ್ರವೀಣ್ ಪೂಜಾರಿ ಹಿರೇಬೆಟ್ಟು, ಮಾರ್ಪಳ್ಳಿ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಅಧ್ಯಕ್ಷ ಸಂಜೀವ ಕೆ. ಪೂಜಾರಿ, ಬೊಳ್ವೆ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಅಧ್ಯಕ್ಷ ದಿನೇಶ್ ಎಂ. ಸಾಲ್ಯಾನ್, ಶ್ರೀ ನಾರಾಯಣಗುರು ಯುವ ವೇದಿಕೆ ಅಧ್ಯಕ್ಷ ಮಿಥುನ್ ಪೂಜಾರಿ, ಸಂತೆಕಟ್ಟೆ-ಕಲ್ಯಾಣಪುರ ಬಿಲ್ಲವ ಸಂಘದ ಅಧ್ಯಕ್ಷ ಶೇಖರ್ ಗುಜ್ಜರಬೆಟ್ಟು, ಮಣಿಪುರ ಬಿಲ್ಲವ ಸಂಘದ ಅಧ್ಯಕ್ಷ ನಟರಾಜ ಪೂಜಾರಿ, ಉದ್ಯಾವರ ಬಿಲ್ಲವ ಸಂಘದ ಅಧ್ಯಕ್ಷ ಯೋಗೀಶ್ ಕೋಟ್ಯಾನ್, ಇಂದಿರಾನಗರ-ಕುಕ್ಕಿಕಟ್ಟೆ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ, ಮೂಡನಿಡಂಬೂರು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಜೀರ್ಣೋದ್ಧಾರ ಸಮಿತಿ ಜತೆಕಾರ್ಯದರ್ಶಿ তেজ। ಸಂದೀಪ್ ಸನಿಲ್, ನಿರ್ದೇಶಕ, ಚಿತ್ರನಟ ಸೂರ್ಯೋದಯ ಪೆರಂಪಳ್ಳಿ, ತೋನ್ಸೆ ಶ್ರೀ ಬ್ರಹ್ಮಬೈದರ್ಕಳ ಪಂಚ ಧೂಮಾವತಿ ಗರೋಡಿ ಅಧ್ಯಕ್ಷ ಹರೀಶ್ ಕುಮಾರ್, ನಿಡಂಬಳ್ಳಿ, ಪಕ್ಕಿಬೆಟ್ಟು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಅಧ್ಯಕ್ಷ ಪ್ರಕಾಶ್ ಪೂಜಾರಿ ಪಡುಮನೆ, ಕಿದಿಯೂರು ಬಿಲ್ಲವ ಸಂಘದ ಅಧ್ಯಕ್ಷ ಸುಧಾಕರ್ ಕಲ್ಯಾಡಿ, ದೆಂದೂರು ಕಲಂಜೆ ಬಿಲ್ಲವ ಸಂಘದ ಅಧ್ಯಕ್ಷ ಸುಧಾಕರ್ ಪೂಜಾರಿ ದೆಂದೂರು, ಬಿಎಸ್‌ಎನ್‌ಡಿಪಿ ಜಿಲ್ಲಾಧ್ಯಕ್ಷ ಶ್ರೀಧರ್ ಅಮೀನ್, ಯೂತ್ ಬಿಲ್ಲವ ಮೂಡುಬೆಳ್ಳೆ ಅಧ್ಯಕ್ಷ ತಿಲಕ್‌ ರಾಜ್ ಪೂಜಾರಿ, ಕೆಸ್ತೂರು ಬಿಲ್ಲವ ಸಂಘದ ಅಧ್ಯಕ್ಷ ದೀಪಕ್ ಸನಿಲ್, ಇನ್ನಂಜೆ ಬಿಲ್ಲವ ಸಂಘದ ಅಧ್ಯಕ್ಷ ಜಗದೀಶ್ ಅಮೀನ್, ಯುವವಾಹಿನಿ ಕಟಪಾಡಿ ಘಟಕ ಅಧ್ಯಕ್ಷ ಪ್ರತಿಮಾ ವಿ. ಪೂಜಾರಿ, ಬಿಲ್ಲವ ಯುವ ವೇದಿಕೆ ಗೌರವ ಸಲಹೆಗಾರರು, ಗುರು ಸಂದೇಶ ಜಾಥಾ ಸಂಚಾಲಕರು, ಸಮಾಜದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಬಿಲ್ಲವ ಯುವ ವೇದಿಕೆ ಉಪಾಧ್ಯಕ್ಷ ಮಹೇಶ್ ಕುಮಾರ್ ಮಲ್ಪೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಜೇಯ ಪೂಜಾರಿ ಮೇಲ್ಮನೆ ವಂದಿಸಿದರು. ತೇಜಸ್ ಬಂಗೇರ ನಿರೂಪಿಸಿದರು..

Related posts

Leave a Comment