Mangalore and Udupi news
Blog

ಮಹಿಳೆಯ ವಿಚಾರಕ್ಕೆ ವ್ಯಕ್ತಿಯ ಕೊಲೆ

ಉಡುಪಿ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಟಲ್ಪಾಡಿಯಲ್ಲಿ ಮಹಿಳೆ ಜೊತೆ ಸಲುಗೆಯ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಂಗಳವಾರ ನಸುಕಿನ ವೇಳೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಹತ್ಯೆಗೊಳಗಾದವರು. ಬೆಳ್ತಂಗಡಿ ತಾಲೂಕು ನಾಡ ನಿವಾಸಿ ಪರೀಕ್ಷಿತ್(44) ಬಂಧಿತ ಆರೋಪಿ.

ಆರೋಪಿ ಪರೀಕ್ಷಿತ್ ಮಂಗಳೂರಿನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಪತ್ನಿಯಿಂದ ವಿಚ್ಛೇದನೆ ಪಡೆದು ಕಾರ್ಕಳದ ದೂಪದಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸ ಮಾಡಿಕೊಂಡಿದ್ದಾನೆ. ನವೀನ್ ಪೂಜಾರಿ ಪತ್ನಿ ಮತ್ತು ಮಕ್ಕಳು ಮಂಗಳೂರಿನಲ್ಲಿದ್ದು, ನಾಲೈದು ವರ್ಷಗಳಿಂದ ಪ್ರತ್ಯೇಕವಾಗಿ ವಾಸವಾಗಿದ್ದಾನೆ. ಪರೀಕ್ಷಿತ್ಗೆ ಪರಿಚಯ ಇರುವ ಮಹಿಳೆ ಜೊತೆ ನವೀನ್ ಪೂಜಾರಿ ಗೆಳೆತನವನ್ನು ಬೆಳೆಸಿ ಆತ್ಮೀಯರಾಗಿದ್ದರು. ಇದು ಪರೀಕ್ಷಿತ್ ಇಷ್ಟವಿರಲಿಲ್ಲ. ಈ ವಿಚಾರದಲ್ಲಿ ಇಬ್ಬರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ನವೀನ್ ಪೂಜಾರಿಯನ್ನು ಪರೀಕ್ಷಿತ್ ಕೊಲೆ ಮಾಡಿದ್ದಾನೆ ಎಂಬುದಾಗಿ ತನಿಖೆಯಿಂದ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Related posts

Leave a Comment