Mangalore and Udupi news
Blog

ಪೂನಾದಲ್ಲಿ ಎಣ್ಣೆಹೊಳೆಯ ಹೊಟೇಲ್ ಉದ್ಯಮಿಯ ಭೀಕರ ಮರ್ಡರ್: ಹೊಟೇಲ್ ಸಿಬ್ಬಂದಿಯಿಂದಲೇ ಹತ್ಯೆಗೀಡಾದ ಸಂತೋಷ್‌ ಶೆಟ್ಟಿ

ಪೂನಾ,ಆ.27: ಹೊಟೇಲ್ ಸಿಬ್ಬಂದಿಯೊಬ್ಬ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದಕ್ಕೆ ಗದರಿದ ಹೊಟೇಲ್‌ ಮಾಲೀಕನನ್ನೇ ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.

ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಹೊಟೇಲ್ ಉದ್ಯಮಿ ಸಂತೋಷ್ ಶೆಟ್ಟಿ(46) ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶ ಮೂಲದ ವೆಯ್ಸ‌ರ್ ಹೊಟೇಲ್ ನಲ್ಲಿ ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿರುವುದಕ್ಕೆ ಬೈದು ಬುದ್ದಿವಾದ ಹೇಳಿದ್ದಕ್ಕೆ ಸಿಟ್ಟಿಗೆದ್ದ ಆತ ಕಿಚನ್’ನಿಂದ ಕತ್ತಿ ಹಿಡಿದುಕೊಂಡು ಬಂದು ಸಂತೋಷ್‌ ಶೆಟ್ಟಿಯವರು ಕುಳಿತ್ತಿದ್ದ ವೇಳೆ ಹಿಂಬದಿಯಿಂದ ಕುತ್ತಿಗೆಗೆ ಕಡಿದು ಹತ್ಯೆ ಮಾಡಿದ್ದಾನೆ.ರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಈ ಭೀಕರ ಹತ್ಯೆಯಿಂದ ಪೂನಾದ ಹೊಟೇಲ್ ಉದ್ಯಮಿಗಳು ಬೆಚ್ಚಿಬಿದ್ದಿದ್ದು ಘಟನಾ ಸ್ಥಳದಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದಾರೆ.

ಮೃತ ಸಂತೋಷ್‌ ಶೆಟ್ಟಿ ಶವವನ್ನು ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ತಿಳಿದುಬಂದಿದೆ

Related posts

Leave a Comment