Mangalore and Udupi news
Blog

ಯಮರೂಪಿಯಾದ KSRTC ಬಸ್‌!; ಅಪಘಾತದ ತೀವ್ರತೆಗೆ ಒಂದೇ ಕುಟುಂಬ ಐವರು ಬಲಿ

ಮಂಗಳೂರಿನ ತಲಪಾಡಿಯಲ್ಲಿ ಇಂದು ಸಂಜೆ ಘಟನೆ, ಏಳು ಮಂದಿರ ಗಂಭೀರ

ಮಂಗಳೂರು: ಮಂಗಳೂರು ಹೊರವಲಯದ ತಲಪಾಡಿಯಲ್ಲಿ ಟೋಲ್‌ಗೇಟ್‌ ಬಳಿ ಕೆಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಭೀಕರ ದುರಂತ ಸಂಭವಿಸಿದೆ. ಯಮರೂಪಿಯಾದ ಕೆಎಸ್‌ಆರ್‌‌ಟಿಸಿ ಬಸ್‌ ಏಕಾಏಕಿ ಬಂದು ಆಟೋಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಭೀಕರ ಅಪಘಾತದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ವರದಿಯಾಗಿದೆ.

ಕಿಲ್ಲರ್‌ KSRTCಗೆ 5 ಮಂದಿ ಬಲಿ

ಕಾಸರಗೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ KSRTC ಬಸ್ ತಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ರಿಕ್ಷಾದಲ್ಲಿ ಒಟ್ಟು ಆರು ಮಂದಿ ಪ್ರಯಾಣಿಕರು ಇದ್ದರು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಡಿಕ್ಕಿಯ ತೀವ್ರತೆಗೆ ರಿಕ್ಷಾದಲ್ಲಿದ್ದ 4 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬ ಪ್ರಯಾಣಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ ಎಂದು ವರದಿಯಾಗಿದೆ.

ಇನ್ನು ಮೃತರಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ, ಒಂದು ಮಗು ಸೇರಿದಂತೆ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಹೇಳಲಾಗಿದೆ. ಇನ್ನು ಉಳಿದ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

Related posts

Leave a Comment