Mangalore and Udupi news
Blog

ಮಂಗಳೂರು : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ : ಆರೋಪಿ ಸಿಸಿಬಿ ಬಲೆಗೆ…!!

ಮಂಗಳೂರು : ನಗರದ ಪ್ರತಿಷ್ಠಿತ ಕಾಲೇಜಿನ ವಿಧ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಮೂಲತ: ಕೇರಳದ ಎರ್ನಾಕುಲಂ ಮಟ್ಟಂಚೇರಿಯ ನಿವಾಸಿ, ದೇರಳಕಟ್ಟೆಯಲ್ಲಿ ನೆಲೆಸಿರುವ ಮುಹಮ್ಮದ್ ಅರ್ಶದ್ ಖಾನ್(29) ಎಂದು ಗುರುತಿಸಲಾಗಿದೆ.

ಈತನಿಂದ 10,85,000 ರೂಪಾಯಿ ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ , ಹೈಡ್ರೋವಿಡ್ ಗಾಂಜಾ, ಎಂಡಿಎಂಎ ಮಾತ್ರೆ ಮತ್ತು ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಸಹಿತ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯು ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಿಂದ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಆರೋಪಿಯು ದೇರಳಕಟ್ಟೆಯ ಪರಿಸರದಲ್ಲಿ ನಿಂತುಕೊಂಡು ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆತನನ್ನು ವಶಕ್ಕೆ ತೆಗೆದುಕೊಂಡು ಆತನ ವಶದಲ್ಲಿದ್ದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Comment