Mangalore and Udupi news
Blog

ರಾಜ್ಯ ಬಿಜೆಪಿಯಿಂದ ಧರ್ಮಸ್ಥಳ ಚಲೋ; ಇಂದು ಮಧ್ಯಾಹ್ನ 2 ಗಂಟೆಗೆ ಬೃಹತ್ ಸಮಾವೇಶ

ಮಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಮತ್ತು ಇದನ್ನು ಖಂಡಿಸಿ ಕರ್ನಾಟಕ ಬಿಜೆಪಿ ಇಂದು ಧರ್ಮಸ್ಥಳ ಚಲೋ ಹಮ್ಮಿಕೊಂಡಿದೆ. 1 ಲಕ್ಷ ಜನ ಕಾರ್ಯಕರ್ತರನ್ನು ಸೇರಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಮಧ್ಯಾಹ್ನ 2 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ.

ದೇವಸ್ಥಾನದ ಹೊರವಲಯದಲ್ಲಿರುವ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಭಾಗಿಯಾಗಲಿದ್ದಾರೆ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಆರ್. ಅಶೊಕ್ ಭಾಗವಹಿಸಲಿದ್ದಾರೆ. 2 ಸಾವಿರ ಬಸ್ 10,000 ಕ್ಕೂ ಅಧಿಕ ಕಾರುಗಳಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಆಗಮಿಸಲಿದ್ದಾರೆ. ಇದರ ಅಂಗವಾಗಿ ಆರ್ ಅಶೋಕ್ ಧರ್ಮಸ್ಥಳದಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

Related posts

Leave a Comment