ಮುಲ್ಕಿ: ಪೊಲೀಸ್ ಠಾಣಾ ಸರಹದ್ದಿನ ಕೊಲ್ನಾಡು ರಾ.ಹೆ. 66 ರ ಮುಲ್ಕಿಯಿಂದ ಮಂಗಳೂರು ಕಡೆಗೆ ಹಾದು ಹೋಗುವ ರಸ್ತೆಯ ಬಳಿ ವ್ಯಕ್ತಿಯೋರ್ವನಿಂದ ಸುಮಾರು 1 ಕೆ.ಜಿ 160 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಮುಲ್ಕಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ಬಿ.ಎಸ್ ರವರು ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದು, ಮಂಗಳೂರು ಕೋಡಿಕಲ್ ನಿವಾಸಿ ಧನೇಶ್ ಎಸ್. ಕುಮಾರ್ (35) ಎಂಬಾತನನ್ನು ಬಂಧಿಸಿದ್ದಾರೆ. ಮೊಬೈಲ್ ಪೋನ್ ಹಾಗೂ ಗಾಂಜಾ ತೂಕ ಮಾಡುವ ಯಂತ್ರ ಮತ್ತು ಇತರೆ ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
previous post

