ಓರ್ವನ ರಕ್ಷಣೆ, ಇಬ್ಬರು ಮೃತ್ಯು….
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾಗಿ, ಇನ್ನೊರ್ವನನ್ನು ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಬೆಂಗಳೂರಿಂದ ಬಂದಿದ್ದ 10 ಮಂದಿ ಯುವಕರ ತಂಡವು ಕುಂಬಾಶಿಯ ಗಾಯಿತ್ರಿ ಕಾಂಪೌಂರ್ಟ್ನಲ್ಲಿ ತಂಗಿದ್ದು ಇಂದು ಮಧ್ಯಾಹ್ನ 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದಿದ್ದಾರೆ.
ಸಮುದ್ರದ ಅಬ್ಬರದ ಅಲೆಗೆ ನಾಲ್ವರು ಕೊಚ್ಚಿ ಹೋಗಿದ್ದು ಓರ್ವನನ್ನು ತಕ್ಷಣ ಸ್ಥಳೀಯರು ಹಾಗೂ ಜೊತೆಗೆ ಇದ್ದ ಯುವಕರು ಸೇರಿ ಎತ್ತಿ ಮೇಲಕ್ಕೆ ತಂದಿದ್ದಾರೆ. ಆದರೆ ಆತ ಗಂಭೀರ ಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕಳಿಸಲಾಯಿತು.
ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಜೀವನ್ ಮಿತ್ರ ನಾಗರಾಜ್ ಪುತ್ರನ್ ರವರು ಸ್ಥಳೀಯರ ಸಹಕಾರದಿಂದ ಇಬ್ಬರ ಮೃತದೇಹವನ್ನು ಪತ್ತೆ ಹಚ್ಚಲಾಯಿತು. ನಾಪತ್ತೆಯಾದ ಇನ್ನೊರ್ವ ಯುವಕನ ಹುಡುಕಾಟ ಮುಂದುವರೆದಿದೆ.