ಪಣಂಬೂರು: ತಣ್ಣೀರುಬಾವಿ ಸಮುದ್ರ ಕಿನಾರೆ ಬಳಿ ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಜೋಕಟ್ಟೆ ನಿವಾಸಿ ಹುಸೇನ್ (21), ಜೋಕಟ್ಟೆ ಪೊರ್ಕೋಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಮುಫೀಝ್ (28) ಎಂದು ತಿಳಿದು ಬಂದಿದೆ.
ಪಣಂಬೂರು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಜ್ಞಾನಶೇಖರ ಅವರು ಠಾಣಾ ವ್ಯಾಪ್ತಿಯಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಸಂದರ್ಭತಣ್ಣೀರುಬಾವಿ ಸಮುದ್ರ ಕಿನಾರೆ ಬಳಿ ಮಾದಕ ವಸ್ತು ಸೇವನೆ ಮಾಡಿ ಅದರ ನಶೆಯಲ್ಲಿ ಇದ್ದಂತೆ ಕಂಡು ಬಂದಿದ್ದ ಹುಸೇನ್ ಮತ್ತು ಮುಫೀಝ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಳಿಕ ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿಗಳು ಮಾಧಕ ವಸ್ತು ಸೇವಿಸಿರುವುದು ದೃಢಪಟ್ಟಿದೆ.
ಈ ಕುರಿತು ಆರೋಪಿಗಳ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.