ಮಂಗಳೂರು: ನಗರದ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರವಿವಾರ ಮಧ್ಯಾಹ್ನ ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಂದರು ಮುಖ್ಯಪ್ರಾಣ ದೇವಸ್ಥಾನ ಬಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿದ್ದ ಖುಷಿ (14) ಮೃತಪಟ್ಟ ವಿದ್ಯಾರ್ಥಿನಿ.
ಮುಂದಿನ ವಾರ ಪರೀಕ್ಷೆ ಇದ್ದುದರಿಂದ ರಾತ್ರಿ ಕೂಡಾ ಮನೆಯಲ್ಲಿ ಓದುತ್ತಿದ್ದಳು. ಜತೆಗೆ ಸ್ವಲ್ಪ ಖಿನ್ನತೆಯಿಂದಲೂ ಬಳಲುತ್ತಿದ್ದಳು.
ಟೆರೇಸ್‌ನಿಂದ ಹಾರಿ ಗಂಭೀರ ಗಾಯಗೊಂಡಿದ್ದು ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.