Mangalore and Udupi news
Blog

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ; ಆರೋಪಿಯ ಬಂಧನ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಯುವಕ ಪೆರ್ಲಂಪಾಡಿ ನಿವಾಸಿ ಉದಯ ಎಂದು ತಿಳಿದು ಬಂದಿದೆ.
ಕೆಲ ದಿನಗಳ ಹಿಂದೆ ವಿದ್ಯಾರ್ಥಿನಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕಿನಲ್ಲಿ ಆಗಮಿಸಿದ ಯುವಕನೋರ್ವ ಕಿರುಕುಳ ನೀಡಿದ್ದಾನೆಂದು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆಯ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ ಬಳಿಕ ಬೈಕ್‌ ನಂಬ‌ರ್ ಪತ್ತೆ ಹಚ್ಚಿದ್ದರು ಎಂದು ತಿಳಿದು ಬಂದಿದೆ.
ಈ ಆಧಾರದ ಮೇಲೆ ಬೆಳ್ಳಾರೆ ಠಾಣೆಯ ಎಸ್‌ಐ ಡಿ.ಎನ್. ಈರಯ್ಯ ನೇತೃತ್ವದ ಪೊಲೀಸ್‌ ತಂಡ ಕಾರ್ಯಾಚರಣೆ ನಡೆಸಿ ಆರೋಪಿ ಉದಯನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Related posts

Leave a Comment