ಕಾರ್ಕಳ : ಮಹಿಳೆಯ ಕುತ್ತಿಗೆಯಿಂದ ಚಿನ್ನ ಕಳವು
ಮಾಡಿದ ಘಟನೆ ಸೆ. 9ರಂದು ಎಳ್ಳಾರೆ ಗ್ರಾಮದಲ್ಲಿ ಸಂಭವಿಸಿದೆ. ಕುಮುದಾ (80) ಎಂಬವರು ತಮ್ಮ ಮನೆಯ ಅಂಗಳದಲ್ಲಿ ಕುಳಿತುಕೊಂಡಿದ್ದಾಗ ಯಾರೋ ಅಪರಿಚಿತ ವ್ಯಕ್ತಿ ಅವರ ಬಳಿ ಬಂದು ತಾನು ಕಾರ್ಕಳದ ಸೂಪರ್ ವೈಸರ್ ಎಂದು ಹೇಳಿ ಇಲ್ಲಿ ಹತ್ತಿರ ಮನೆ ಇದೆಯಾ, ನಿಮ್ಮ ಮನೆಯಲ್ಲಿ ಸಿಸಿ ಕ್ಯಾಮರಾ ಇದೆಯಾ ಎಂದೆಲ್ಲಾ ವಿಚಾರಿಸಿದ್ದಾನೆ. ಸ್ವಲ್ಪ ಸಮಯ ಅಲ್ಲಿಯೇ ಕುಳಿತು ನಂತರ ಕುಮುದಾ ಅವರ ಕುತ್ತಿಗೆಗೆ ಕೈ ಹಾಕಿ ಅವರನ್ನು ನೆಲಕ್ಕೆ ದೂಡಿ ಕುತ್ತಿಗೆಯಲ್ಲಿದ್ದ 25 ಗ್ರಾಂ ತೂಕದ ಚಿನ್ನದ ರೋಪ್ ಚೈನನ್ನು ಕಿತ್ತುಕೊಂಡು ಓಡಿ ಹೋಗಿದ್ದಾನೆ. ಕುಮುದಾ ಅವರು ನೆಲಕ್ಕೆ ಬಿದ್ದ ಪರಿಣಾಮ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಕಾರ್ಕಳ ಟಿಎಂಎಪೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
