ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಳವರ ಬ್ರಿಡ್ಜ್ ಕೆಳಗಡೆ ರೈಲಿಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಶರಣಾದವರು ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿ ಎಂದು ತಿಳಿದುಬಂದಿದೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಎಎಸ್‌ಐ ಲಕ್ಷ್ಮಣ್ ಪೂಜಾರಿ, ಹೆಡ್ ಕಾಸ್ಟೇಬಲ್ ರಾಘವೇಂದ್ರ, ಆರ್ ಪಿ ಎಫ್ ಸಿಬ್ಬಂದಿ ಸುಧೀರ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಕಾನೂನು ಪ್ರಕ್ರಿಯೆ ನಡೆಸಿದರು ಎಂದು ತಿಳಿದು ಬಂದಿದೆ.
ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ