Mangalore and Udupi news
Blog

ಕೊಕ್ಕರ್ಣೆ| ಮದುವೆಗೆ ನಿರಾಕರಿಸಿದ ಯುವತಿಗೆ ಪಾಗಲ್ ಪ್ರೇಮಿಯಿಂದ ಚೂರಿ ಇರಿತ- ಯುವತಿ ಗಂಭೀರ

ಬ್ರಹ್ಮಾವರ: ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಮೊಗವಿರಪೇಟೆ ಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ರಕ್ಷಿತಾ (24) ಇರಿತಕ್ಕೆ ಒಳಗಾದ ಯುವತಿ.
ಆರೋಪಿ ಕಾರ್ತಿಕ್ ಪೂಜಾರಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ

ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿ ಕುಸಿದು ಬಿದ್ದಿದ್ದಾಳೆ .ಜೀವನ್ಮರಣ ಹೋರಾಟದಲ್ಲಿದ್ದ ಯುವತಿಯನ್ನು ಮಣಿಪಾಲ ಕಸ್ತೂರ್ ಬಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಯುವಕ ಯುವತಿಯನ್ನು ಪ್ರೀತಿಸುತ್ತಿದ್ದು ಮದುವೆ ಆಗಬೇಕು ಎಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ. ಆಕೆ ಮತ್ತು ಆಕೆಯ ಮನೆಯವರು ಇದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಇಬ್ಬರಿಗೆ ಜಗಳ ನಡೆಯುತ್ತಿತ್ತು. ಇಂದು ಬೆಳಿಗ್ಗೆ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಬೆನ್ನತ್ತಿ ಬಂದ ಯುವಕ, ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆಗೈಯ್ಯಲು ಯತ್ನಿಸಿದ್ದಾನೆ. ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನೀಡುವುದಾಗಿ ಉಡುಪಿ ಎಸ್ ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Related posts

Leave a Comment