Mangalore and Udupi news
Blog

ಪೋಸ್ಟ್ ಕಾರ್ಡ್ ನ ಮಹೇಶ್ ವಿಕ್ರಮ್ ಹೆಗ್ಡೆ ಬಂಧನಕ್ಕೆ ಹಿಂದೂ ಸಂಘಟನೆ ಆಕ್ರೋಶ

ಪತ್ರಕರ್ತ ಮಹೇಶ್ ವಿಕ್ರಂ ಹೆಗಡೆ ಬಂಧನ
ಮೂಡಬಿದ್ರೆ: ಮದ್ದೂರು ಗಣೇಶೋತ್ಸವ ಸಂದರ್ಭದಲ್ಲಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ ಮತಾಂಧರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹ ಬರೆದ ಕಾರಣಕ್ಕೆ ಹಿಂದೂ ಪರ ಚಿಂತಕ ಹಾಗೂ ಪತ್ರಕರ್ತ ಮಹೇಶ್ ವಿಕ್ರಂ ಹೆಗ್ಡೆಯವರನ್ನು ಪೊಲೀಸರು ಮೂಡಬಿದರೆಯಲ್ಲಿ ಬಂಧಿಸಿದ್ದಾರೆ.

ಮುಸ್ಲೀಂ ಓಲೈಕೆಯಲ್ಲಿ ಮುಳುಗಿ ಹೋಗಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುತ್ವ ಹಾಗೂ ಹಿಂದುಪರ ಧ್ವನಿಗಳನ್ನು ಉಡುಗಿಸುವ ಪ್ರಯತ್ನ ನಡೆಸುತ್ತಿದೆ. ಮಹೇಶ್ ವಿಕ್ರಂ ಹೆಗ್ಡೆಯವರ ಬಂಧನವನ್ನು ಹಿಂದೂ ಜಾಗರಣ ವೇದಿಕೆ ಮೂಡಬಿದ್ರೆ ಖಂಡಿಸಿದೆ.

ಪೋಲಿಸ್ ಇಲಾಖೆ ಸರ್ಕಾರದ ಅಣತಿಯಂತೆ ಹಿಂದೂ ಸಂಘಟನೆಗಳು ಹಾಗೂ ಹಿಂದುತ್ವದ ಪರ ಕೆಲಸ ಮಾಡುವವರ ವಿರುದ್ಧ ಸುಳ್ಳು ಸುಳ್ಳು ಮೊಕದ್ದಮೆ ಗಳನ್ನು ದಾಖಲಿಸಿ ಬಂದಿಸುತ್ತಿರುವುದು ನಾಚಿಗೇಡಿನ ವಿಚಾರ ಹಿಂದುಗಳ ಧಾರ್ಮಿಕ ಹಕ್ಕು, ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು, ಪ್ರತಿಭಟನೆಯ ಹಕ್ಕನ್ನು ಕಸಿದುಕೊಳ್ಳುತ್ತಿರುವ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಂವಿಧಾನ ವಿರೋಧಿ ಪಥದಲ್ಲಿ ಸಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

Leave a Comment