Mangalore and Udupi news
Blog

ಹಬ್ಬ, ಉತ್ಸವಗಳ, ಮೆರವಣಿಗೆಗೆ ಪೊಲೀಸ್‌ ಇಲಾಖೆ ಅಡ್ಡಿಪಡಿಸಿಲ್ಲ : ಕಮಿಷನರ್‌ ಸುಧೀರ್‌ ರೆಡ್ಡಿ…!!

ಮಂಗಳೂರು: ಯಾವುದೇ ಹಬ್ಬಗಳ ಸಾರ್ವಜನಿಕ ಆಚರಣೆ, ಉತ್ಸವ, ಮೆರವಣಿಗೆಗಳಿಗೆ ಪೊಲೀಸ್‌ ಇಲಾಖೆ ಅಡ್ಡಿಪಡಿಸಿಲ್ಲ. ಸಮಯದ ಮಿತಿಯನ್ನೂ ನಿಗದಿ ಪಡಿಸಿಲ್ಲ. ಆದರೆ ಇತರರಿಗೆ ಸಮಸ್ಯೆಯಾಗಬಾರದು ಎನ್ನುವ ನಿಟ್ಟಿನಲ್ಲಿ “ಶಬ್ಧದ ಮಿತಿ’ ನಿಗದಿಪಡಿಸಲಾಗಿದ್ದು, ಅದನ್ನು ಪಾಲಿಸಿಕೊಂಡು ಕಾರ್ಯಕ್ರಮ ಆಯೋಜಿಸಬೇಕು ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಮಿಷನ ರೇಟ್‌ ವ್ಯಾಪ್ತಿಯಲ್ಲಿ ಸಾಕಷ್ಟು ಗಣೇಶೋತ್ಸವ ಮೆರವಣಿಗೆಗಳು ತಡರಾತ್ರಿಯವರೆಗೆ ನಡೆದಿದೆ. ಎಲ್ಲಿಯೂ ಪೊಲೀಸರು ಸಮಸ್ಯೆ ಕೊಟ್ಟಿಲ್ಲ. ಆದರೆ ಮೈಕ್‌ಗಳ ಸೌಂಡ್‌ಗೆ ಮಾತ್ರ ಮಿತಿಯನ್ನು ಹಾಕಲಾಗಿತ್ತು. ನೆಹರೂ ಮೈದಾನದಲ್ಲಿ ಮಂಗಳೂರು ಗಣೇಶೋತ್ಸವವ ಕಾರ್ಯಕ್ರಮ ಹಾಗೂ ಅದರ ಮೆರವಣಿಗೆ ಅಚ್ಚುಕಟ್ಟಾಗಿ ಆಯೋಜನೆ ಗೊಂಡಿತ್ತು. ಟ್ಯಾಬ್ಲೋಗಳಲ್ಲಿ ನಾವು ಸೂಚಿಸಿದಷ್ಟೇ ಸೌಂಡ್‌ ಬಳಕೆ ಮಾಡಿದ್ದಾರೆ. ಮುಂಜಾನೆ 2.30ರ ವರೆಗೆ ಮೆರವಣಿಗೆ ನಡೆದಿದ್ದು, ಯಾರಿಗೂ ಸಮಸ್ಯೆಯೂ ಆಗಿಲ್ಲ ಎಂದರು.

ನಾಟಕ, ಯಕ್ಷಗಾನಗಳಿಗೂ ಇದೇ ಮಾರ್ಗಸೂಚಿಯಿದ್ದು, ಎಲ್ಲಿ, ಎಷ್ಟು ಬೇಕಾದರೂ ಸೌಂಡ್‌ ಇಡುವ ಅವಕಾಶ ಇಲ್ಲ. ಒಳಾಂಗಣ ಮತ್ತು ಹೊರಾಂಗಣ ಕಾರ್ಯಕ್ರಮಗಳ ವ್ಯಾಪ್ತಿ ಎಷ್ಟು? ಎಷ್ಟು ಜನ ಸೇರುತ್ತಾರೆ ಎನ್ನುವುದನ್ನು ಆಧರಿಸಿ ಅದನ್ನು ಅನುಗುಣವಾಗಿ ಮೈಕ್‌ ಬಳಕೆ ಮಾಡಬೇಕು. 100 ಜನ ಸೇರುವಲ್ಲಿ 2000 ಜನರಿಗೆ ಕೇಳಿಸುವಷ್ಟು ಧ್ವನಿವರ್ಧಕ ಅಳವಡಿಸಿ ಇತರರಿಗೆ ತೊಂದರೆ ಮಾಡಲು ಯಾವುದೇ ರೀತಿಯಲ್ಲಿ ಅವಕಾಶ ನೀಡುವುದಿಲ್ಲ.

Related posts

Leave a Comment