ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಿಗರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಅತೀ ವೇಗ ಮತ್ತು ಅಜಾರೂಕತೆಯ ಚಾಲನೆಯಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಹೆದ್ದಾರಿಯಲ್ಲಿ ಸಂಚಾರ ದಟ್ಟನೆಯುಂಟಾಗಿದ್ದು, ಇತರ ವಾಹನಗಳ ಸಂಚಾರಕ್ಕೆ ತೊಡಕು ಉಂಟಾಗಿತ್ತು ಎನ್ನಲಾಗಿದೆ.
