Mangalore and Udupi news
Blog

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿಚಾರ; ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಮೈಸೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ. ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದಿದೆ.

Related posts

Leave a Comment