Mangalore and Udupi news
Blog

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ

ಬೆಂಗಳೂರು: ನಗರದ ಹೆಚ್‌ಎಎಲ್ ಮುಖ್ಯದ್ವಾರದ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಬಸ್‌ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು.

ಈ ಬಸ್‌ನಲ್ಲಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.

ಬಸ್ ಚಲಿಸುತ್ತಿದ್ದಂತೆ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತುಗೊಂಡ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕ್ರಮೇಣ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್ ಸುಟ್ಟು ಕರಕಲಾಗಿದೆ. ಚಾಲಕನ ಸಮಯಪ್ರಜ್ಞೆಯಿಂದ 75 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಳಿಕ ಹೆಚ್‌ಎಲ್‌ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Related posts

Leave a Comment