Mangalore and Udupi news
Blog

ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ವಿದ್ಯಾರ್ಥಿನಿಯಾರಾದ ಮಾನಸ ವಿನಾಯಕ್, ಹರ್ಷಿತ ವಿನಾಯಕ್, ಆದ್ಯ ಎಸ್. ಪಡ್ರೆ, ಆರುಷಿ, ಪೂರ್ವಿ ಎಸ್. ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Related posts

Leave a Comment