ಉಡುಪಿ: ಕಾಂತರಾಜ್ ವರದಿಯನ್ನು ಈ ಸರ್ಕಾರ ತಿರಸ್ಕರಿಸಲೂ ಇಲ್ಲ.. ಅಂಗೀಕರಿಸಿಯೂ ಇಲ್ಲ, ಈಗ ಮತ್ತೊಮ್ಮೆ ಹೊಸ ವರದಿಗೆ ಸಿದ್ದರಾಮಯ್ಯ ಸರ್ಕಾರ ಹೊರಟಿದೆ. 42 ರಿಂದ 50 ಜಾತಿಯ ಜೊತೆ ಕ್ರಿಶ್ಚಿಯನ್ ಎಂಬ ಪದ ಸೇರಿಸಿದ್ದಾರೆ. ಇದರ ಬಗ್ಗೆ ನಮ್ಮ ಕಠಿಣವಾದ ವಿರೋಧ ಇದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲಿಂಗಾಯಿತ ಕ್ರಿಶ್ಚಿಯನ್ ,ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ,ಈಡಿಗ ಕ್ರಿಶ್ಚಿಯನ್ ,ಮಡಿವಾಳ ಕ್ರಿಶ್ಚಿಯನ್..ಹೀಗೆ ಜಾತಿಯ ಜೊತೆ ಕ್ರಿಶ್ಚಿಯನ್ ಎಂಬ ಪದ ಬಳಕೆ ಮಾಡಿದ್ದಾರೆ. ಮತಾಂತರಗೊಳ್ಳಲು ಸರ್ಕಾರ ಸಂಪೂರ್ಣ ಬೆಂಬಲ ಎಂಬಂತೆ ತೋರುತ್ತಿದೆ. ಆಯೋಗದ ಮೂಲಕ ಮತಾಂತರಕ್ಕೆ ಅವಕಾಶ ನೀಡಿದಂತಾಗಿದೆ. ಹಿಂದೂ ಧರ್ಮದ ಸಣ್ಣ ಜಾತಿಗಳನ್ನು ಸರ್ಕಾರ ಒಡೆಯಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

previous post