Mangalore and Udupi news
Blog

ಪಡುಬಿದ್ರಿ: ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡಲು ಯತ್ನ – ಇಬ್ಬರು ಆರೋಪಿಗಳ ಬಂಧನ

ಪಡುಬಿದ್ರಿ: ಇಲ್ಲಿನ ಬಡಾ ಗ್ರಾಮ ಉಚ್ಚಿಲ ಪೊಲ್ಯ ರಸ್ತೆಯ ಮೈದಾನದಲ್ಲಿ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿ ಮಾದಕವಸ್ತು ಮಾರಾಟ ತಡೆ ಕಾಯಿದೆಯನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಲ್ಲಾರು ಗ್ರಾಮದ ಪಕೀರ್ಣಕಟ್ಟೆ ಮಸೀದಿ ಬಳಿಯ ನಿವಾಸಿ ಫರ್ಹಾನ್ (27) ಹಾಗೂ ಕಾಪು ಕೊಂಬಗುಡ್ಡೆ ನಿವಾಸಿ ಮಹಮ್ಮದ್ ಹಾಸಿಂ (21) ಬಂಧಿತರು.

ಆರೋಪಿಗಳಿಂದ ಸುಮಾರು 30 ಸಾವಿರ ರೂ. ಮೌಲ್ಯದ 9.37 ಗ್ರಾಂ ತೂಕದ ಎಂಡಿಎಂಎ ಮಾತ್ರೆ ಗಳ ಪ್ಯಾಕೆಟ್‌ಗಳು, 5 ಸಾವಿರ ರೂ. ನಗದು, ವಿವೋ ಕಂಪೆನಿಯ ಒಂದು ಮೊಬೈಲ್‌ ಹಾಗೂ ಆರೋಪಿಗಳು ಬಳಸಿದ್ದ ಮೋಟಾರು ಸೈಕಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Related posts

Leave a Comment