ಮಂಗಳೂರು: ಇನ್ಮಾಗ್ರಾಮ್ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ನಗರ ಸೆನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಮಲವಂತಿಗೆಯ ಕಿಲ್ಲೂರು ಮನೆ ನಿವಾಸಿ ಮುಹಮ್ಮದ್ ಕೈಫ್(22) ಎಂದು ತಿಳಿದು ಬಂದಿದೆ .
Karavali_tigers ಎಂಬ Instagram ಪೇಜ್ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದಲ್ಲಿ ಕೈಫ್ ವಿರುದ್ಧ ಮಂಗಳೂರು ನಗರ ಸೆನ್ ಅಪರಾಧ ಠಾಣೆಯಲ್ಲಿ ಜುಲೈ 19ರಂದು ಪ್ರಕರಣ ದಾಖಲಾಗಿತ್ತು ಎಂದು ತಿಳಿದು ಬಂದಿದೆ.ತಾಂತ್ರಿಕ ಸಾಕ್ಷ್ಯಗಳ ಮೂಲಕ ಪತ್ತೆ ಮಾಡಿ, ಆರೋಪಿ ತಮಿಳುನಾಡಿಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.Karavali_tigers ಎಂಬ ಪೇಜ್ ವಿರುದ್ಧ ಬಜ್ಜೆ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.