ಉಡುಪಿ: ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮಂಗಳೂರು ಗಂಜಿಮಠ ನಿವಾಸಿ ನಜೀರ್ (45) ಎಂದು ತಿಳಿದು ಬಂದಿದೆ.
ಆರೋಪಿ ವೆಬ್‌ಸೈಟ್ ಲಿಂಕ್ ಮತ್ತು ಆ್ಯಪ್ ಬಳಸಿ ಆಸ್ಟೈನ್ ಬೆಟ್ಟಿಂಗ್ ಆಡುತ್ತಿರುವುದು ಕಂಡುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿಯಿಂದ 30,000ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.