ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೋಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯ ನಿರೀಕ್ಷಕರಾದ ಸುಬ್ಬಾಪುರ್ ಮರ್ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಸಂದೇಶ್ ರವರು ಆರೋಪಿಯ ಮೇಲೆ ಆರೋಪ ಸಾಬೀತಾದ ಕಾರಣ, ಆರೋಪಿ ಉಮೇಶ್ ಗೌಡ ಎಂಬವರಿಗೆ ಮೂರು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ಹಾಗೂ 5,000 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ ಆರು ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ನೀಡಿರುತ್ತಾರೆ. ಸರ್ಕಾರದ ಪರ ಸಹಾಯಕ ಸಹಕಾರಿ ಅಭಿಯೋಜಕರಾಗಿ ಶ್ರೀಮತಿ ಆಶಿತಾ ರವರು ವಾದಿಸಿರುತ್ತಾರೆ..
previous post