ಕಾರ್ಕಳ: ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಕುಕ್ಕುಂದೂರು ತೋಟಗಾರಿಕೆ ಇಲಾಖೆಯ ಫಾರ್ಮ್ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.
ಉಡುಪಿಯಿಂದ ಕಾರ್ಕಳದತ್ತ ಬರುತ್ತಿದ್ದ ಕಾರು ಚಾಲಕನ ನಿದ್ದೆಯ ಮಂಪರಿನಿಂದಾಗಿ ನಿಯಂತ್ರಣ ಕಳೆದುಕೊಂಡು ಬಸ್‌ಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.
ಘಟನೆಯಿಂದ ಎರಡೂ ವಾಹನಗಳು ಜಖಂ ಆಗಿದೆ ಎಂದು ತಿಳಿದು ಬಂದಿದೆ.
ಕಾರಿನ ಚಾಲಕ ಸಣ್ಣಪುಟ್ಟ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.