Mangalore and Udupi news
Blog

ಸೈಫುದ್ದೀನ್ ಹತ್ಯೆ ಪ್ರಕರಣ; ಆರೋಪಿಗಳ ಸುಳಿವು ಲಭ್ಯ..!

ಮಲ್ಪೆ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ನನ್ನು ಮೂವರು ದುಷ್ಕರ್ಮಿಗಳು ಮಾರಕಾಯಧಗಳಿಂದ ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಉಡುಪಿ‌ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.


ಕೊಲೆ ನಡೆದ ಕೊಡವೂರು ಸಾಲ್ಮರದಲ್ಲಿರುವ ಮನೆಗೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಈ ಕೃತ್ಯವನ್ನು ಆತನ ಬಸ್ಸಿನಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಮೂವರು ಆರೋಪಿಗಳು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸೈಫುದ್ದಿನ್ ವಿರುದ್ಧ ಒಟ್ಟು 18 ಪ್ರಕರಣಗಳು ದಾಖಲಾಗಿದ್ದು ಉಡುಪಿ ಮತ್ತು ಮಲ್ಪೆ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟರ್ ಆಗಿದ್ದಾರೆ. ಎರಡು ಕೊಲೆ ಪ್ರಕರಣದ ನೇರ ಆರೋಪಿಯಾಗಿದ್ದಾನೆ ಎಂದರು.

ಬೆಳಗಿನ ಜಾವ 10ರಿಂದ 11 ಗಂಟೆಯ ನಡುವೆ ದುಷ್ಕೃತ್ಯ ನಡೆದಿದೆ. ಮೂರು ಜನ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಪೊಲೀಸ್ ತಂಡಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದು ತೀವ್ರ ತನಿಖೆ ನಡೆಸುತ್ತಿದೆ. ಕಾನೂನು ಪ್ರಕ್ರಿಯೆ ಮುಂದುವರಿದಿದ್ದು ಶೀಘ್ರ ಆರೋಪಿಗಳನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ‌.

Related posts

Leave a Comment