ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಖಂಬದಕೋಣೆ ಎಂಬಲ್ಲಿ ಕಂಟೇನರ್ ಲಾರಿಯೊಂದು ಸೇತುವೆಗೆ ಡಿಕ್ಕಿಯಾಗಿ ನಿಂತಿರುವ ಘಟನೆ ವರದಿಯಾಗಿದೆ.
ಕಂಟೇನರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ನದಿಗೆ ಉರುಳುವ ಸಾಧ್ಯತೆ ಇತ್ತು. ಅದೃಷ್ಟವಶಾತ್ ಸೇತುವೆಯಲ್ಲಿ ನಿಂತ ಕಾರಣ ಕಂಟೇನರ್‌ನಲ್ಲಿದ್ದ ಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಂಟೇನರ್ ಲಾರಿ ಮಂಗಳೂರಿನಿಂದ ಗೋವಾ ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.